ಬೆಂಗಳೂರು: ಸಂಗೀತ ನಿರ್ದೇಶಕ ಹಂಸಲೇಖ ಅವರು ಸರಿಗಮಪ ವೇದಿಕೆಯಲ್ಲಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅವರ ಹೇಳಿಕೆಯನ್ನು ಆಧರಿಸಿ ಝೀ ಕನ್ನಡ ಜಾತಿವಾದಿಯಂತೆ ನಡೆದುಕೊಂಡಿದೆ ಎಂಬ ಆಕ್ರೋಶ ವ್ಯಕ್ತವಾಗಿತ್ತು.
ಈ ನಡುವೆ ಇಂದು ಸಂದೇಶವೊಂದನ್ನು ಅಭಿಮಾನಿಗಳ ಜೊತೆಗೆ ಹಂಚಿಕೊಂಡಿರುವ ಹಂಸಲೇಖ ಅವರು, “ನನ್ನ ಆರೋಗ್ಯ ಸ್ಥಿರವಾಗಿದೆ. ಸರಿಗಮಪ ನನ್ನ ಪ್ರೀತಿಯ ಭೂಮಿಕೆ ಅದು ಮನಸ್ಸು ಮನಸ್ಸುಗಳನ್ನು ನೇಯುವ ವೇದಿಕೆ ಸುಧಾರಣೆಗಳ ಸುಂದರ ಕಥೆಗಳನ್ನು ಓದಿಕೊಳ್ಳುತ್ತಿದ್ದೇನೆ. ಬೇಗ ಬಂದು ಸೇರಿಕೊಳ್ಳುತ್ತೇನೆ ಎಂದು ಬರೆದಿದ್ದು, ಈ ಮೂಲಕ ಅಭಿಮಾನಿಗಳಿಗೆ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ಹಂಸಲೇಖ ಅವರನ್ನು ಸರಿಗಮಪ ವೇದಿಕೆಯಿಂದ ಹೊರ ಹಾಕಲಾಗಿದೆ ಎನ್ನುವ ವದಂತಿಗಳ ನಡುವೆಯೇ ಹಂಸಲೇಖ ಅವರು ನೀಡಿರುವ ಸ್ಪಷ್ಟನೆಯಿಂದಾಗಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನೊಂದೆಡೆಯಲ್ಲಿ ಹಂಸಲೇಖ ಅವರು ಕ್ಷಮೆಯಾಚಿಸಿದರೂ, ಅವರ ವೃತ್ತಿ ಬದುಕು ಹಾಗೂ ಸಾಮಾಜಿಕ ಕಳಕಳಿ ಎರಡನ್ನೂ ನಾಶ ಮಾಡಲು ನಡೆದ ಯತ್ನದ ಬಗ್ಗೆ ವ್ಯಾಪಕ ಆಕ್ರೋಶಗಳು ಕೂಡ ಇದೀಗ ಕೇಳಿ ಬಂದಿವೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700