ಬೆಂಗಳೂರು: ವಿಶ್ವ ಹಿಂದೂ ಪರಿಷತ್ ನ ಪ್ರಮುಖರು ಗುರುವಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿಯಾಗಿ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಿದರು.
ಪ್ರತಿಪಕ್ಷಗಳ ನಾಯಕರಿಗೆ ರಾಮ ಮಂದಿರ ಉದ್ಘಾಟನೆಯ ಆಮಂತ್ರಣ ನೀಡಲಾಗುತ್ತಿಲ್ಲ ಎಂಬ ಕಾಂಗ್ರೆಸ್ ನಾಯಕರ ಆರೋಪಗಳ ಮಧ್ಯೆಯೇ ರಾಮ ಮಂದಿರ ಉದ್ಘಾಟನೆಯ ‘ಅಕ್ಷತಾ ಅಭಿಯಾನ’ದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಪ್ರಮುಖರು ಹೆಬ್ಬಾಳ್ಕರ್ ಅವರ ಮನೆಗೆ ತೆರಳಿ, ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್ ಹೆಬ್ಬಾಳ್ಕರ್, ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರಾದ ಪರಮೇಶ್ವರ ಹೆಗಡೆ, ಶ್ರೀಕಾಂತ ಕದಂ, ಆನಂದ ಬುಕ್ಕೆಬಾಗ್, ಗುರುದತ್ತ ಕುಲಕರ್ಣಿ ಉಪಸ್ಥಿತರಿದ್ದರು.


