ಬೆಂಗಳೂರು: ಆಹಾರದಲ್ಲಿ ಜಿರಳೆ ಕಾಣಿಸಿಕೊಂಡಿದ್ದನ್ನು ಪ್ರಶ್ನಿಸಿದ ಹೈಕೋರ್ಟ್ ವಕೀಲರೊಬ್ಬರ ಮೇಲೆ ಹೋಟೆಲ್ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವಕೀಲೆ ಶೀಲಾ ದೀಪಕ್ ಅವರು ಗುರುವಾರ ಮಧ್ಯಾಹ್ನ ರಾಜಭವನ ರಸ್ತೆಯಲ್ಲಿರುವ ಕ್ಯಾಪಿಟಲ್ ಹೋಟೆಲ್ ಗೆ ಊಟಕ್ಕೆ ತೆರಳಿದ್ದರು. ಅವರಿಗೆ ಬಡಿಸಿದ ಪನೀರ್ ಬಟರ್ ಮಸಾಲಾ ಖಾದ್ಯದಲ್ಲಿ ಜಿರಳೆ ಕಂಡು ಬಂದಿತ್ತು.
ನಂತರ ಅವರು ಮೊಬೈಲ್ ಫೋನ್ ಬಳಸಿ ಅಡುಗೆ ಮನೆಯ ವಿಡಿಯೋ ರೆಕಾರ್ಡ್ ಮಾಡಲು ಯತ್ನಿಸಿದಾಗ ಇಬ್ಬರು ಮಹಿಳಾ ಸಿಬ್ಬಂದಿ ಮತ್ತು ಒಬ್ಬ ಪುರುಷ ಕೆಲಸಗಾರ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ.
ಬಳಿಕ ಶೀಲಾ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಡುಗೆ ಮನೆಯ ವಿಡಿಯೋ ರೆಕಾರ್ಡ್ ಮಾಡಲು ಯತ್ನಿಸಿದಾಗ ಹೋಟೆಲ್ ಸಿಬ್ಬಂದಿ ಆಕೆಯ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಬಳಿಕ ಶೀಲಾ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಘಟನೆಯ ಸಂಬಂಧ ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), 341 (ಅಸಂಯಮದ ವರ್ತನೆ), 504 (ಉದ್ದೇಶಪೂರ್ವಕ ಅವಮಾನ), 353 (ಹಲ್ಲೆ) ಮತ್ತು ಇತರ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


