ರಾಮ ಮಂದಿರ ಉದ್ಘಾಟನಾ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಲವು ವಿವಿಐಪಿಗಳು ಉಪಸ್ಥಿತರಾಗಲಿದ್ದಾರೆ. ದೇಶಾದ್ಯಂತ ಸಹ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಟಿಟಿಡಿ ಎಕ್ಸಿಕ್ಯೂಟೀವ್ ಆಫೀಸರ್ ಎ.ವಿ. ಧರ್ಮರೆಡ್ಡಿ ಅವರು ಲಕ್ಷ ಲಕ್ಷ ಶ್ರೀವಾರಿ ಲಡ್ಡುಗಳನ್ನು ಅಯೋಧ್ಯೆಗೆ ಕಳುಹಿಸುತ್ತಿದ್ದೇವೆ. ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಮತ್ತು ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಬರುವ ಭಕ್ತರಿಗೆ ಈ ಲಡ್ಡುಗಳನ್ನು ನೀಡಲಾಗುತ್ತದೆ. ಪ್ರತಿ ಲಡ್ಡು 25 ಗ್ರಾಂ ತೂಗುತ್ತದೆ. ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಉದ್ಘಾಟನೆಗೆ ಇಡೀ ದೇಶವೇ ಕಾತರದಿಂದ ಕಾಯುತ್ತಿದೆ ಎಂದು ಹೇಳಿದ್ದಾರೆ.


