ಔರಾದ: ಕರವೇ ರಾಜ್ಯ ಅಧ್ಯಕ್ಷರಾದ ಟಿ.ಎ. ನಾರಾಯಣಗೌಡ ಅವರನ್ನು ಹಾಗೂ ಕರವೇ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬೀದರ್ ಜಿಲ್ಲೆಯ ಔರಾದ ಪಟ್ಟಣದಲ್ಲಿ ಔರಾದ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಕ್ಷಣಾ ವೇದಿಕೆಯು ಕಳೆದ ಡಿಸೆಂಬರ್ 27 ರಂದು ಬೆಂಗಳೂರಿನಲ್ಲಿ ಕನ್ನಡ ನಾಮ ಫಲಕ ಕಡ್ಡಾಯವಾಗಿ ಹಾಕುವಂತೆ ನಡೆಸಿದ ಬೃಹತ್ ಜನಜಾಗೃತಿ ರಾಲಿಯಲ್ಲಿ ಭಾಗವಹಿಸಿದ್ದ ರಾಜ್ಯ ಅಧ್ಯಕ್ಷರಾದ ಟಿ.ಎ. ನಾರಾಯಣಗೌಡ ಹಾಗೂ ಕರವೇ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿರುವುದನ್ನು ಪ್ರತಿಭಟನಾಕಾರರು ಖಂಡಿಸಿದರು.
ಮುಖ್ಯಮಂತ್ರಿಗಳು ಕೂಡಲೇ ನಮ್ಮ ರಾಜ್ಯಾಧ್ಯಕ್ಷರನ್ನು ಹಾಗೂ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿ, ಅವರ ವಿರುದ್ದ ಹೂಡಿರುವ ಮೊಕದ್ದಮೆಯನ್ನು ಹಿಮ್ಮಪಡೆಯವಂತೆ ಒತ್ತಾಯಿಸಿದ ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು.
ಮನವಿ ಸಲ್ಲಿಸಿದ ನಂತರ ಮಾತನಾಡಿದ ಕರವೇ ಜಿಲ್ಲಾ ಅಧ್ಯಕ್ಷ ಸೋಮನಾಥ ಮುದೊಳ, ನಾಡ ನುಡಿ ನೆಲ ಜಲಕ್ಕಾಗಿ ಜೀವನ ಪರ್ಯಂತ ಹೋರಾಟ ನಡೆಸಿಕೊಂಡು ನಾರಾಯಣ ಗೌಡರನ್ನು ಯಾವುದೇ ಪ್ರಕರಣ ದಾಖಲಿಸದೆ, ಮುಖ್ಯಮಂತ್ರಿಗಳು ಕೂಡಲೆ ಬಿಡುಗಡೆಗೊಳಿಸದಿದ್ದರೆ, ಮುಂಬರುವ ದಿನಗಳಲ್ಲಿ ಉಗ್ರ ರೂಪದ ಹೋರಾಟ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್


