ಬೆಂಗಳೂರು: ರಾಜ್ಯದ ಜನರಿಗೆ ಈಗಾಗಲೇ ವಿದ್ಯುತ್ ಬೆಲೆಯೇರಿಕೆಯಿಂದ ಪರಿತಪಿಸುತ್ತಿರುವ ಬೆನ್ನಲ್ಲೇ ರಾಜ್ಯದ ಜನರಿಗೆ ಮತ್ತೊಮ್ಮೆ ವಿದ್ಯುತ್ ಬೆಲೆಯೇರಿಕೆಯ ಬಿಸಿ ತಾಗುವ ಸಾಧ್ಯತೆ ಇದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಸೇರಿ ರಾಜ್ಯದ ಎಲ್ಲ ಎಸ್ಕಾಂಗಳು ವಿದ್ಯುತ್ ಬೆಲೆಯೇರಿಕೆ ಕುರಿತು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲಿಯೇ ಒಂದು ಯೂನಿಟ್ ಗೆ 50-60 ಪೈಸೆ ಜಾಸ್ತಿಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಬೆಸ್ಕಾಂ ಜತೆಗೆ ರಾಜ್ಯದಲ್ಲಿರುವ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ), ಕಲಬುರಗಿ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (ಸೆಸ್ಕ್–ಮೈಸೂರು) ಕೂಡ ವಿದ್ಯುತ್ ಬೆಲೆಯೇರಿಕೆ ಕುರಿತಂತೆ ಕೆಇಆರ್ ಸಿಗೆ ಪ್ರಸ್ತಾವನೆ ಸಲ್ಲಿಸಿವೆ.


