ಉತ್ತರ ಪ್ರದೇಶ: ತನ್ನ ಸೋದರಸಂಬಂಧಿಯ ಯುವತಿಗೆ ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. 25 ವರ್ಷದ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕೃತ್ಯವನ್ನು ಮಾಡಿದ ಯುವತಿಯ ಚಿಕ್ಕಪ್ಪನ ಮಗ ಜ್ಞಾನ್ ಪ್ರಕಾಶ್ (26) ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಕಾಶ್ ಯುವತಿಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಯುವತಿಯನ್ನು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಎಸ್ಪಿ ಲಕ್ಷ್ಮಿ ನಿವಾಸ್ ಮಿಶ್ರಾ ಹೇಳಿದ್ದಾರೆ.
ಪೊಲೀಸರ ತನಿಖೆ ಪ್ರಕಾರ, ಜ್ಞಾನ್ ಪ್ರಕಾಶ್ ಈ ಯುವತಿಯನ್ನು ಮದುವೆಯಾಗುವುದಾಗಿ ಹೇಳಿಕೊಂಡಿದ್ದಾನೆ, ಆದರೆ ಯುವತಿ ಈ ಮದುವೆ ಒಪ್ಪಿಲ್ಲ ಎಂದು ಹೇಳಲಾಗಿದೆ. ತನ್ನನ್ನು ತಿರಸ್ಕರಿಸಿದ್ದಕ್ಕಾಗಿ ಆಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಘಟನೆ ನಡೆದ ತಕ್ಷಣ ಆತ ಅಲ್ಲಿಂದ ಪರಾರಿಯಾಗಿದ್ದು. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹಾಗೂ ಆತನ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.


