ಕೊರಟಗೆರೆ: ತಾಲೂಕು ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಚಿಮಾರನಹಳ್ಳಿ ಗ್ರಾಮಕ್ಕೆ ಸುಮಾರು ಹತ್ತು ತಿಂಗಳಿನಿಂದ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಇಓ ಅಪೂರ್ವ ವಿರುದ್ದ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಂಚಿಮಾರನಹಳ್ಳಿ ಗ್ರಾಮಸ್ಥರು ಕಳೆದ 10 ತಿಂಗಳಿಂದ ನೀರಿಲ್ಲದೇ ಪರದಾಡುತ್ತಿದ್ದಾರೆ. ತಾಲ್ಲೂಕು ಪಂಚಾಯಿತಿ ಇಓ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ಗ್ರಾಮಸ್ಥರು ಸಮಸ್ಯೆಯನ್ನು ತಂದರು ಸಹ ಅಧಿಕಾರಿಗಳ ನಿರ್ಲಕ್ಷ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.
ಸರಕಾರಿ ಅಧಿಕಾರಿಗಳ ನಿರ್ಲಕ್ಷಕ್ಕೆ ಹಂಚಿಮಾರನಹಳ್ಳಿ ಗ್ರಾಮಸ್ಥರಿಗೆ ಪ್ರಾಣ ಸಂಕಟವಾಗಿದೆ, ಪ್ರತಿ ನಿತ್ಯದ ನಿತ್ಯ ಕರ್ಮಗಳಿಗೂ ಗ್ರಾಮಸ್ಥರು ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಚಿಮಾರನಹಳ್ಳಿ ಗ್ರಾಮಸ್ಥರ ಗೋಳು ಯಾರು ಕೇಳೋರೋ ಯಾರು…? ಎನ್ನುವ ಪ್ರಶ್ನೆ ಎದುರಾಗಿದೆ.
ಕೊಳವೆಬಾವಿ ಕೊರೆಸಲು ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಡುವೆ ಭಾರಿ ತಿಕ್ಕಾಟ ಏರ್ಪಟ್ಟಿದೆ. ಹೀಗಾಗಿ ಸಾರ್ವಜನಿಕರು ದಿನನಿತ್ಯ ಪರದಾಡುವಂತಾಗಿದೆ.
ತಾಲ್ಲೂಕು ಪಂಚಾಯಿತಿ ಇ ಓ ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದರೂ ಅವರು ಬಗ್ಗದೇ, ಗ್ರಾಮಸ್ಥರ ಮನವಿಯನ್ನು ಸ್ವೀಕರಿಸದೇ ಗಂಟೆಗಟ್ಟಲೆ ಗ್ರಾಮಸ್ಥರನ್ನು ಕಾಯಿಸಿ, ಇಂಗ್ಲಿಷ್ ನಲ್ಲಿಯೇ ಮುಗ್ದ ಜನರಿಗೆ ಉತ್ತರ ಕೊಟ್ಟಿದ್ದಾರೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಸಂಬಂಧ ಪಟ್ಟವರು ನಿದ್ದೆಯಿಂದ ಎದ್ದು ಗ್ರಾಮಸ್ಥರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುತ್ತಾರಾ ಕಾದು ನೋಡಬೇಕಿದೆ.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


