ಭೋಪಾಲ್ ನ ಅನಾಥಾಶ್ರಮದಿಂದ 26 ಹುಡುಗಿಯರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಅನಾಥಾಶ್ರಮದ ಆಡಳಿತ ಮಂಡಳಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಷ್ಟ್ರೀಯ ಮಕ್ಕಳ ಹಕ್ಕು ಆಯೋಗವು ಅನಾಥಾಶ್ರಮಕ್ಕೆ ಭೇಟಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. 26 ಹುಡುಗಿಯರು ನಾಪತ್ತೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಮಧ್ಯಪ್ರವೇಶಿಸಲು ಮುಂದಾದರು.
ಜಾರ್ಖಂಡ್ ಮತ್ತು ಗುಜರಾತ್ ರಾಜ್ಯಗಳ ಬಾಲಕಿಯರು ಅನಾಥಾಶ್ರಮದಿಂದ ನಾಪತ್ತೆಯಾಗಿದ್ದಾರೆ. ಮ್ಯಾನೇಜರ್ ಅನಿಲ್ ಮ್ಯಾಥ್ಯೂ ವಿರುದ್ಧ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಏತನ್ಮಧ್ಯೆ, ಘಟನೆಯ ಕುರಿತು ಮಕ್ಕಳ ಹಕ್ಕು ಆಯೋಗವು ಮುಖ್ಯ ಕಾರ್ಯದರ್ಶಿಯಿಂದ ವರದಿ ಕೇಳಿದೆ.


