ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ಪದಾಧಿಕಾರಿಗಳು ಇಂದು ಸಿಎಂ ಸಿದ್ದರಾಮಯ್ಯನ್ನು ಭೇಟಿಯಾಗಿ ಎನ್.ಪಿ.ಎಸ್ ರದ್ದತಿ ಸಂಬಂಧ ಚರ್ಚಿಸಿದ್ದಾರೆ.
ಎನ್.ಪಿ.ಎಸ್ ರದ್ದತಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು. ಎನ್.ಪಿ.ಎಸ್ ರದ್ದತಿಯ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು.
ಇದನ್ನು ರದ್ದು ಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ ಕುರಿತು ಸಹ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಲಿದೆ ಎಂದು ಸಿಎಂ ಹೇಳಿದ್ದಾರೆ.


