ತಮಿಳುನಾಡಿನಲ್ಲಿ ಮತ್ತೆ ಧಾರಾಕಾರ ಮಳೆಯಾಗಿದೆ. ಕಡಲೂರು, ವಿಲ್ಲುಪುರಂ ಸೇರಿದಂತೆ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. 10 ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಡಲೂರು, ವಿಲ್ಲುಪುರಂ, ಮೈಲಾಡುತುರೈ, ನಾಗಪಟ್ಟಣಂ, ವೆಲ್ಲೂರು, ರಾಣಿಪೇಟ್, ತಿರುವಣ್ಣಾಮಲೈ, ತಿರುವರೂರು, ಕಲ್ಲುಕುರಿಚಿ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಾರೀ ಮಳೆಯಿಂದಾಗಿ ಅಣ್ಣಾಮಲೈ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಿದೆ. ಪುದುಚೇರಿಯೂ ಶಾಲೆಗಳಿಗೆ ರಜೆ ಘೋಷಿಸಿದೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಲ್ಬಣಿಸಿದೆ. ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಬಹುತೇಕ ಕಡೆಗಳಲ್ಲಿ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿದೆ.


