ಪಾವಗಡ: ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಸಲುವಾಗಿ ಹಾಗೂ ಸಾರ್ವಜನಿಕರಿಗೆ ಶೀಘ್ರ ಕಚೇರಿ ಕೆಲಸ ಮಾಡಿಕೊಡುವ ಸಲುವಾಗಿ ಅಧಿಕಾರಿಗಳ ಸಹಿತ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕರಾದ ಹೆಚ್.ವಿ. ವೆಂಕಟೇಶ್ ತಿಳಿಸಿದರು.
ತುಮಕೂರು ಜಿಲ್ಲಾಡಳಿತ ಮತ್ತು ಪಾವಗಡ ತಾಲ್ಲೂಕು ಪಂಚಾಯತ್ ಸಹಯೋಗದೊಂದಿಗೆ ಹಾಗೂ ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್ ಮತ್ತು ಶಾಸಕರಾದ ಹೆಚ್ ವಿ ವೆಂಕಟೇಶ್ ರವರ ನೇತೃತ್ವದಲ್ಲಿ ಪಟ್ಟಣದ ಎಸ್ ಎಸ್ ಕೆ ಬಯಲು ರಂಗಮಂದಿರದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರ ಯಾವುದೇ ಸಮಸ್ಯೆಗಳನ್ನು ಬೇಗ ಇತ್ಯರ್ಥಪಡಿಸಬೇಕು ಹಾಗೂ ಸತಾಯಿಸಬಾರದು ಎಂದು ಅಧಿಕಾರಿಗಳಿಗೆ ತಾಖೀತು ಮಾಡಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಸಾರ್ವಜನಿಕರ ಕುಂದುಕೊರತೆಯನ್ನು ಪರಿಹಾರ ಮಾಡಲು ಜನತಾ ದರ್ಶನ ಉತ್ತಮ ಕಾರ್ಯಕ್ರಮ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಯಿತು. ವಿವಿಧ ಇಲಾಖೆಗಳಿಂದ ಅರ್ಹ ಪಲಾನುಭವಿಗಳಿಗೆ ಹಲವು ಸೌಲಭ್ಯಗಳನ್ನು ವಿತರಣೆ ಮಾಡಲಾಯಿತು.
ಈ ವೇಳೆ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಮತ್ತು ವಿವಿಧ ಇಲಾಖೆಗಳ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕರುಗಳು, ಅಧಿಕಾರಿಗಳು ಮತ್ತು ತಾಲ್ಲೂಕು ದಂಡಾಧಿಕಾರಿ ವರದರಾಜು ರವರು, ಕಾರ್ಯ ನಿರ್ವಹಣಾ ಅಧಿಕಾರಿ ಜಾನಕಿ ರಾಮ್ ರವರು ಸೇರಿದಂತೆ ಇತರೆ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ


