ಭಾರತಕ್ಕೆ ಆಗಮಿಸಿದ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ಆತ್ಮೀಯ ಸ್ವಾಗತ ದೊರೆಯಿತು. ಅಹಮದಾಬಾದ್ ನಲ್ಲಿ ಯುಎಇ ಅಧ್ಯಕ್ಷರನ್ನು ಪ್ರಧಾನಿ ನರೇಂದ್ರ ಮೋದಿ ಬರಮಾಡಿಕೊಂಡರು. ವೈಬ್ರೆಂಟ್ ಗುಜರಾತ್ ಶೃಂಗಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ವೈಬ್ರೆಂಟ್ ಗುಜರಾತ್ ಇಂಟರ್ನ್ಯಾಷನಲ್ ಶೃಂಗಸಭೆಯ 10 ನೇ ಆವೃತ್ತಿಯಲ್ಲಿ ಭಾಗವಹಿಸಲು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯುಎಇ ಅಧ್ಯಕ್ಷರನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು. ವಿದೇಶಾಂಗ ಸಚಿವ ಎಸ್ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತಿತರರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಗಾರ್ಡ್ ಆಫ್ ಆನರ್ ಸ್ವೀಕರಿಸಿದ ನಂತರ, ಯುಎಇ ಅಧ್ಯಕ್ಷರು ಸಹ ಪ್ರಧಾನಿಯೊಂದಿಗೆ ರೋಡ್ ಶೋನಲ್ಲಿ ಭಾಗವಹಿಸಿದರು. ವೈಬ್ರೆಂಟ್ ಗುಜರಾತ್ ಶೃಂಗಸಭೆಯಲ್ಲಿ ಯುಎಇ ವಾಣಿಜ್ಯ ಖಾತೆ ರಾಜ್ಯ ಸಚಿವ ಥಾನಿ ಬಿನ್ ಅಹ್ಮದ್ ಅಲ್ ಸೆಯುದಿ ಮತ್ತು ಗಲ್ಫ್ ರಾಷ್ಟ್ರದ ಸಂಪೂರ್ಣ ನಿಯೋಗ ಮತ್ತು ಟಿಮೋರ್ ಲೆಸ್ಟೆ ಅಧ್ಯಕ್ಷ ಜೋಸ್ ರಾಮೋಸ್-ಹೊರ್ಟಾ ಸೇರಿದಂತೆ ವಿಶ್ವ ನಾಯಕರು ಭಾಗವಹಿಸಿದ್ದಾರೆ.


