ಪ್ರತಾಪ್ ಸಿಂಹ ನ್ಯಾಷನಲ್ ಲೀಡರಾ? ಎಂಬ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಟೀಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಖಂಡಿತ ನಾನು ನ್ಯಾಷನಲ್ ಲೀಡರ್ ಅಲ್ಲ. ಸಾಮಾನ್ಯ ಕುಟುಂಬದ ಹಿನ್ನೆಲೆಯಲ್ಲಿ ಬಂದು ಬರವಣಿಗೆ ಮೂಲಕ ಹೆಸರು ಸಂಪಾದಿಸಿ ಈ ಸ್ಥಾನಕ್ಕೆ ಬಂದಿದ್ದೇನೆ. ಅಪ್ಪ ಸಿಎಂ ಆಗಿದ್ದರೆ ತನ್ನ ಖಾಸಗಿ ಲ್ಯಾಬ್ ಗೆ ಗುತ್ತಿಗೆ ಪಡೆದು ಕೊಳ್ಳುವಂತವರು ನ್ಯಾಷನಲ್ ಲೀಡರ್.
ಅಪ್ಪನ ನೆಲೆ ಬಿಡಿಸಿ ಬದಾಮಿ ಕ್ಷೇತ್ರಕ್ಕೆ ಓಡಿಸುವವರು ನ್ಯಾಷನಲ್ ಲೀಡರ್. ತಾನು ಹೇಳಿದ ವರ್ಗಾವಣೆ ಲಿಸ್ಟ್ ಗೆ ಸಹಿ ಮಾಡಿ ಅಂತಾ ಸಿಎಂ ಮೇಲೆ ಒತ್ತಡ ತರುವವರು ನ್ಯಾಷನಲ್ ಲೀಡರ್. ಮೈಸೂರು ಭಾಗದ ನಿಜವಾದ ನ್ಯಾಷನಲ್ ಲೀಡರ್ ಯತೀಂದ್ರ ಸಿದ್ದರಾಮಯ್ಯ ಎಂದು ಟಾಂಗ್ ನೀಡಿದರು.


