nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ

    September 14, 2026

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026
    Facebook Twitter Instagram
    ಟ್ರೆಂಡಿಂಗ್
    • ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    • ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!
    • ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
    • ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
    • ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಹುಬ್ಬಳ್ಳಿ: ಗಣೇಶ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ – ಕಿಡಿಗೇಡಿಗಳಿಗೆ ಪೊಲೀಸರಿಂದ ಲಾಠಿ ರುಚಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಮರಸ್ಯದ ಬದುಕಿನಿಂದ ಆತ್ಮತೃಪ್ತಿ ಸಾಧ್ಯ: ಶ್ರೀ ಚಂದ್ರಶೇಖರನಾಥ ಸ್ವಾಮೀಜಿ
    Uncategorized January 17, 2024

    ಸಾಮರಸ್ಯದ ಬದುಕಿನಿಂದ ಆತ್ಮತೃಪ್ತಿ ಸಾಧ್ಯ: ಶ್ರೀ ಚಂದ್ರಶೇಖರನಾಥ ಸ್ವಾಮೀಜಿ

    By adminJanuary 17, 2024No Comments2 Mins Read
    thipatooru 2

    ತಿಪಟೂರು: ಮನುಷ್ಯನು ರಾಗ, ದ್ವೇಷಗಳನ್ನು ಮರೆತು ಪರಸ್ಪರರ ಜೊತೆ ಪ್ರೀತಿ, ವಿಶ್ವಾಸದಿಂದ ಬೆರೆಯುತ್ತಾ ಜೀವನ ನಡೆಸಿದಾಗ ಮಾತ್ರ ಮಾನಸಿಕ ಹಾಗೂ ಆತ್ಮತೃಪ್ತಿಯು ದೊರಕುತ್ತದೆ ಎಂದು ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

    ತಾಲ್ಲೂಕಿನ ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯ ಆವರಣದಲ್ಲಿ ಮಕರಸಂಕ್ರಾಂತಿಯ ಅಂಗವಾಗಿ ಶ್ರೀಮಠ ಮತ್ತು ದಸರೀಘಟ್ಟ ಗ್ರಾಮಸ್ಥರು ಸಹಯೋಗದಲ್ಲಿ ರಾಶಿಪೂಜೆ ಹಾಗೂ ಗೋವುಗಳಿಗೆ ಕಿಚ್ಚು ಹಾಯಿಸುವ ಕಾರ್ಯಕ್ರಮಕ್ಕೆ ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಆಶೀರ್ವಚನ ನೀಡಿದರು.

    ಮಾನವ ತನ್ನ ಜೀವನದಲ್ಲಿ ಹಣ, ಐಶ್ವರ್ಯದ ಸಂಪಾದನೆಗಾಗಿ ಹೆಚ್ಚು ಶ್ರಮಿಸುತ್ತಾನೆ. ಮಾನವೀಯ ಮೌಲ್ಯಗಳನ್ನು ಮರೆತು ತನ್ನ ಸುಖವೇ ಪರಮಸುಖವೆಂದು ಭಾವಿಸುತ್ತಾ ಪರಮಾತ್ಮನನ್ನು ಕಾಣುವ ಗೋಜಿಗೆ ಹೋಗದೇ ಸ್ವಾರ್ಥದಿಂದ ತನ್ನಪಾಡಿಗೆ ತಾನಿರುತ್ತಾನೆ. ಜೀವನದಲ್ಲಿ ಅಂತರಂಗದಲ್ಲಿರುವ ಪರಮಾತ್ಮನನ್ನು ಹುಡುಕದೇ ಎಲ್ಲೆಲ್ಲಿಗೋ ಹೋಗುತ್ತೇವೆ. ಆದರೆ ಪರಮಾತ್ಮ ನಮ್ಮಲ್ಲಿಯೇ ನೆಲೆಸಿರುತ್ತಾನೆ ಎಂಬುದು ತಿಳಿದೇ ಇರುವುದಿಲ್ಲ. ಮಾನವನ ಮನಸ್ಸಿನಲ್ಲಿ ಎಲ್ಲಾರೀತಿಯ ವಿಚಾರಗಳು ನೆಲೆಸಿದ್ದು ಉತ್ತಮ ವಿಚಾರಗಳನ್ನು ಉಳಿಸಿ ಕೆಟ್ಟ ವಿಚಾರಗಳನ್ನು ದೇವಾಲಯ, ಮಠಗಳಿಗೆ ಬಂದಂತಹ ಸಂದರ್ಭದಲ್ಲಿ ಬಿಟ್ಟು ಹೋಗಬೇಕು. ಪರಮಾತ್ಮನು ಎಲ್ಲರಿಗೂ ಒಂದೇ ರೀತಿಯಲ್ಲಿ ಅಥೈಸಿಕೊಳ್ಳಲು ಸಾಧ್ಯವಿಲ್ಲ. 21ನೇ ಶತಮಾನದಲ್ಲಿಯೂ ಮೂರ್ತಿ ಪೂಜೆ ಆಚರಣೆಯಲ್ಲಿದೆ ಎಂದರೆ ಆ ಮೂರ್ತಿಯಲ್ಲಿನ ಶಕ್ತಿ ದೈವತ್ತವ ಇದೇ ಎನ್ನುವುದನ್ನು ತಿಳಿಯುವ ಅವಶ್ಯಕವಿದೆ. ಧರ್ಮ ಎಂದರೆ ಎಲ್ಲಾ ಮತಗಳು ಇಲ್ಲಿ ನೆಲೆಸಿರುತ್ತವೆ. ಮಾನವನು ಇದರ ಒಳ ಅರ್ಥವನ್ನು ತಿಳಿದು ನಡೆಯಬೇಕು ಎಂದರು.

    ಕಿಚ್ಚು ಹಾಯಿಸುವಿಕೆ:

    ಗ್ರಾಮಸ್ಥೆರೆಲ್ಲಾ ಮಠದ ಆವರಣದಲ್ಲಿ ಸೇರಿ ತಮ್ಮ ರಾಸುಗಳನ್ನು ಸಿಂಗಾರ ಮಾಡಿ ಕಿಚ್ಚು ಹಾಯಿಸುವಿಕೆಗೆ ಸಿದ್ಧರಾದಾಗ ಭತ್ತದ ಒಣ ಹುಲ್ಲನ್ನು ಹಾಕಿ ಪೂಜೆ ಸಲ್ಲಿಸಿದ ಶ್ರೀಗಳು ಕಿಚ್ಚು ಹಚ್ಚಿಸಿದ ತಕ್ಷಣವೇ ಸಿಂಗರಿಸಿದ ರಾಸುಗಳು ಕಿಚ್ಚಿನಲ್ಲಿ ಹಾಯ್ದು ಓಡಿದವು. ದಣಿದು ಬಂದಂತಹ ದನಗಳಿಗೆ ಎಡೆ ಮಾಡಿ ಹಬ್ಬದ ಊಟವನ್ನು ಎಡೆಯ ರೂಪದಲ್ಲಿ ನೀಡಿದರು. ಗ್ರಾಮ ದೇವತೆಯಾದ ಶ್ರೀ ಚೌಡೇಶ್ವರಿ ದೇವಿಯ ದೇವಾಲಯವನ್ನು ಮೂರು ಸುತ್ತು ಸುತ್ತಿ ತಮ್ಮ ತಮ್ಮ ಮನೆಗಳಿಗೆ ತೆರಳುತ್ತವೆ. ಕಾರ್ತಿಕ ಮಾಸದಲ್ಲಿ ಚೆನ್ನಾಗಿ ಮೇಯ್ದು ಮೈತುಂಬಿಕೊಂಡ ದನಗಳಿಗೆ “ ಕಣ್ಣೆಸರಾಗಬಾರದೆಂದು” ಕಿಚ್ಚು ಹಾಯಿಸುತ್ತಾರೆ. ಅಲ್ಲದೇ ದನಕರುಗಳಿಗೆ ಯಾವುದೇ ಸಾಂಕ್ರಾಮಿಕ ರೋಗಗಳು ಬಾರದಿರಲೆಂಬ ಉದ್ದೇಶದಿಂದ ಕಿಚ್ಚು ಹಾಕಲಾದ ಸ್ಥಳದ ಬೂದಿಯನ್ನು ಹೊಯ್ದು ಜಾನವಾರುಗಳಿಗೆ ಸವರುತ್ತಾರೆ. ಮನೆ ಮಂದಿಯೆಲ್ಲ ಬೂದಿಯನ್ನು ವಿಭೂತಿಯಾಗಿ ಬಳಸುತ್ತಾರೆ.

    ಈ ಸಂದರ್ಭದಲ್ಲಿ ಮಠದ ಆಚರಣದಲ್ಲಿ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು, ಗ್ರಾಮಸ್ಥರು ಸೇರಿದ್ದು ಸಡಗರವನ್ನು ತುಂಬಿಕೊಳ್ಳುವ ಜೊತೆಗೆ ಹಬ್ಬದ ವಾತಾವರಣ ಸೃಷ್ಠಿಯಾಗಿತ್ತು. ತದ ನಂತರದಲ್ಲಿ ಎಲ್ಲರಿಗೂ ದಸರೀಘಟ್ಟದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿಯವರು ಎಳ್ಳು ಬೆಲ್ಲ, ಪೊಂಗಲ್ ನೀಡಿ ಆಶೀರ್ವದಿಸಿದರು.

    ವರದಿ: ಆನಂದ, ತಿಪಟೂರು

    admin
    • Website

    Related Posts

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026

    ಹಸು–ಎಮ್ಮೆ ಸಾಕಾಣಿಕೆ : ಸಹಾಯಧನಕ್ಕೆ ಅರ್ಜಿ ಸಲ್ಲಿಸಿ

    September 10, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ

    September 14, 2026

    ವಿ.ಎಂ.ಎಸ್. ಗೋಪಿ ಭಾರತೀಯರ ಸಾಂಸ್ಕೃತಿಕ ಪರಂಪರೆಯಲ್ಲಿ ಹಬ್ಬಗಳಿಗೆ ವಿಶೇಷ ಸ್ಥಾನವಿದೆ. ಅದರಲ್ಲೂ ಗೌರಿ-ಗಣೇಶ ಹಬ್ಬ ಅಂದರೆ ಮನೆ-ಮನಗಳಲ್ಲಿ ಎಲ್ಲೆಡೆ ಸಂಭ್ರಮದ…

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.