ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ಶ್ರೀರಾಮ ಮಂದಿರ ಪ್ರಾಣ-ಪ್ರತಿಷ್ಠಾ ಸಮಾರಂಭಕ್ಕೆ, ತಮಿಳುನಾಡಿನಿಂದ ಪಟಾಕಿಗಳನ್ನು ಸಾಗಿಸುತ್ತಿದ್ದ ಟ್ರಕ್ ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಈ ದುರ್ಘಟನೆಯು ಉನ್ನಾವೋ ಜಿಲ್ಲೆಯ ಪೂರ್ವಾ ಖಾರ್ಗಿ ಖೇಡಾ ಗ್ರಾಮದ ಬಳಿ ನಡೆದಿದೆ. ಈ ಘಟನೆಯ ವಿಡಿಯೋವನ್ನು ಸ್ಥಳೀಯರು ರೆಕಾರ್ಡ್ ಮಾಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.


