ಬೆಂಗಳೂರು: ‘ಆನ್ ಲೈನ್ ಡೇಟಿಂಗ್’ ಆ್ಯಪ್ ಮೂಲಕ ಪರಿಚಯವಾದ ಯುವಕನಿಗೆ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಬಾಲಿವುಡ್ ನಿರ್ದೇಶಕಿ ದೀಪಿಕಾ ನಾರಾಯಣ ಭಾರದ್ವಾಜ್ ಅವರು ‘ಎಕ್ಸ್’ ಖಾತೆಯಲ್ಲಿ ಬರಹ ಪ್ರಕಟಿಸಿ, ಅದನ್ನು ನಗರ ಪೊಲೀಸ್ ಕಮಿಷನರ್ ಗೆ ಟ್ಯಾಗ್ ಮಾಡಿದ್ದಾರೆ. ಮಹಿಳೆ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಇದಕ್ಕೆ ನಗರ ಪೊಲೀಸರು ಪ್ರತಿಕ್ರಿಯಿಸಿ, ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ. ಜತೆಗೆ ತಮ್ಮ ಮೊಬೈಲ್ ನಂಬರ್ ನೀಡುವಂತೆ ಸೂಚಿಸಿದ್ದಾರೆ.


