ಉತ್ತರ ದೆಹಲಿ: 14 ವರ್ಷದ ಬಾಲಕಿಯ ಮೇಲೆ ಆಕೆಯ ತಾಯಿಯ ಲಿವ್-ಇನ್ ಸಂಗಾತಿ ಅತ್ಯಾಚಾರವೆಸಗಿರುವ ಸಂಗತಿ ಬೆಳಕಿಗೆ ಬಂದಿದೆ. ಆರೋಪಿ ಅಂಕಿತ್ ಯಾದವ್ (29) ಗಾಜಿಯಾಬಾದ್ ನ ಲೋನಿ ನಿವಾಸಿಯಾಗಿದ್ದು, ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.
ಪೊಲೀಸರ ಪ್ರಕಾರ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376, ಮತ್ತು 506 ಕ್ರಿಮಿನಲ್ ಬೆದರಿಕೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಬುರಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಗೆ ಮದುವೆಯಾಗಿ ಮೂವರು ಮಕ್ಕಳಿದ್ದಾರೆ, ಎಂಟು ವರ್ಷಗಳ ಹಿಂದೆ ತನ್ನ ಪತಿಯನ್ನು ತೊರೆದಿದ್ದ ಆಕೆ, ನಂತರ ಬಸ್ ಚಾಲಕ ಯಾದವ್ ಜೊತೆ ಲಿವ್-ಇನ್ ಸಂಬಂಧದಲ್ಲಿದ್ದಳು ಎಂದು ಎಫ್ ಐಆರ್ ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.
ಜುಲೈ 23 ರಂದು ಮಹಿಳೆ ಆಸ್ಪತ್ರೆಯಲ್ಲಿದ್ದು ಮಕ್ಕಳನ್ನು ಮನೆಯಲ್ಲಿ ಬಿಟ್ಟು ಹೋಗಿದ್ದಳು, ಅಂದು ಯಾದವ್ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.
ಮಹಿಳೆ ಪೊಲೀಸರಿಗೆ ವಿಷಯ ತಿಳಿಸಿದ್ದು, ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ


