ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರು ಸಾವಿಗೆ ಶರಣಾಗಿರುವ ಘಟನೆ ಸಕಲೇಶಪುರ ತಾಲೂಕಿನ ಪೊಲೀಸ್ ಕ್ವಾಟರ್ಸ್ ನಲ್ಲಿ ನಡೆದಿದೆ.
ಸೋಮಶೇಖರ್(39) ಸಾವಿಗೆ ಶರಣಾದವರಾಗಿದ್ದಾರೆ. ಇವರು ಸಕಲೇಶಪುರದಲ್ಲಿ 112 ಪೊಲೀಸ್ ವಾಹನದ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಸೋಮಶೇಖರ್ ಪತ್ನಿ ಆತನ ವಿರುದ್ಧ ಕಿರುಕುಳದ ಆರೋಪ ಮಾಡಿ ಡಿವೈಎಸ್ ಪಿಗೆ ದೂರು ನೀಡಿದ್ದರು. ಇದರಿಂದ ನೊಂದು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಸೋಮಶೇಖರ್ ಪತ್ನಿ ಶಿಕ್ಷಕಿಯಾಗಿದ್ದು, ಇಬ್ಬರ ನಡುವೆ ಕೌಟುಂಬಿಕ ಕಲಹಗಳಿದ್ದವು ಎನ್ನಲಾಗಿದೆ. ಸಕಲೇಶಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


