ತುಮಕೂರು: ವಿಪ್ರೋ ಎಂಟರ್ ಪ್ರೈಸಸ್ ಪ್ರೈ.ಲಿ. ಮತ್ತು ಮಡಿಲು ಸೇವಾ ಟ್ರಸ್ಟ್(ರಿ), ಊರ್ಡಿಗೆರೆ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಊರ್ಡಿಗೆರೆ ಗ್ರಾ.ಪಂ. ಆವರಣದಲ್ಲಿ ಜನವರಿ 20ರಂದು ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.
ತುಮಕೂರಿನ ಅಪರೇಷನ್ಸ್ ವಿಪ್ರೋ ಎಂಟರ್ ಪ್ರೈಸಸ್ ನ ವೈಸ್ ಪ್ರೆಸಿಡೆಂಟ್ ವಿಶ್ವನಾಥ್ ಕಾರ್ಕಡ ಅವರು ಉದ್ಘಾಟನೆ ಮಾಡಲಿದ್ದಾರೆ. ಮಡಿಲು ಸೇವಾ ಟ್ರಸ್ಟ್ ನ ಮುಖ್ಯಸ್ಥ ಸಿ.ಕೆ.ಮುರಳೀಧರನ್ ಅಧ್ಯಕ್ಷತೆ ವಹಿಸಲಿದ್ದಾರೆ.
ಊರ್ಡಿಗೆರೆ ಗ್ರಾ.ಪಂ. ಅಧ್ಯಕ್ಷರಾದ ಅನ್ನಪೂರ್ಣಮ್ಮ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಊರ್ಡಿಗೆರೆ ಗ್ರಾ.ಪಂ. ಉಪಾಧ್ಯಕ್ಷರಾದ ಸುಗುಣ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಪ್ರಭ, ಮಡಿಲು ಸೇವಾ ಟ್ರಸ್ಟ್ ಟ್ರಸ್ಟಿ ಅಬ್ರಹಾಂ ಭಾಗವಹಿಸಲಿದ್ದಾರೆ.
ಹಿರಿಯ ಪತ್ರಕರ್ತರು, ಪ್ರಗತಿಪರ ಚಿಂತಕರಾದ ಸಾ.ಚಿ.ರಾಜಕುಮಾರ್, ಪ್ರಾಧ್ಯಾಪಕರಾದ ಡಾ.ಪರಶುರಾಮ ಕೆ.ಜಿ. ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮಕ್ಕೆ ಊರ್ಡಿಗೆರೆ ಗ್ರಾ.ಪಂ. ಸದಸ್ಯರು, ಕಚೇರಿ ಸಿಬ್ಬಂದಿ ಹಾಗೂ ಸಂಸ್ಥೆಯ ಸ್ವಯಂ ಸೇವಕರು ಮೊದಲಾದವರು ಸಹಕಾರ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.