ಹೊಸದಿಲ್ಲಿ: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಪ್ರಕರಣದ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 2023ರ ನವೆಂಬರ್ ನಲ್ಲಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ನಕಲಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.
ಬಳಿಕ ಆ ವೀಡಿಯೊ ಬ್ರಿಟಿಷ್ ನಟಿ ಜಾರಾ ಪಟೇಲ್ ಅವರದ್ದು ಎಂದು ಗುರುತಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿರುವ ನಾಲ್ಕು ಶಂಕಿತರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಆದರೆ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದ. ಈಗ ಆತನನ್ನೂ ಬಂಧಿಸಲಾಗಿದೆ.


