ಗೋವಾ ಹೋಟೆಲ್ ಮ್ಯಾನೇಜರ್ ಒಬ್ಬರು ಪತ್ನಿಯನ್ನು ಸಮುದ್ರದಲ್ಲಿ ಮುಳುಗಿಸಿ ಕೊಂದು ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಘಟನೆ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೌರವ್ ಕಟಿಯಾರ್ ಎಂಬ ಆರೋಪಿ ತನ್ನ ಪತ್ನಿ ದೀಕ್ಷಾ ಗಂಗ್ವಾರ್(27) ಅವರ ಸಾವನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಿಸಿದ್ದರು.
ಪೊಲೀಸರು ಗಂಗ್ವಾರ್ ಮಹಿಳೆಯ ಶವವನ್ನು ಫೇಮಸ್ ಆಗಿರುವ ಬೀಚ್ ಬಳಿ ಪತ್ತೆ ಮಾಡಿದ್ದಾರೆ. ಒಂದು ವರ್ಷದ ಹಿಂದಷ್ಟೇ ವಿವಾಹವಾಗಿದ್ದರು, ಅವರು ಬೇರೊಬ್ಬ ಮಹಿಳೆ ಜತೆ ಅನೈತಿಕ ಸಂಬಂಧ ಹೊಂದಿದ್ದರು. ಅವರಿಬ್ಬರ ನಡುವೆ ಈಕೆ ಅಡ್ಡಬರುತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಹತ್ಯೆ ಮಾಡಿದ್ದಾನೆ ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದೆ.


