ಮುಂಬಯಿ: ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಸೇತುವೆಯ ಡಿವೈಡರ್ ಗೆ ಡಿಕ್ಕಿಯಾದ ಘಟನೆಯು, ಒಂದು ವಾರದ ಹಿಂದೆಯಷ್ಟೇ ಉದ್ಘಾಟನೆಯಾದ ದೇಶದ ಅತೀ ದೊಡ್ಡ ಸೇತುವೆ ಮುಂಬಯಿ ಟ್ರಾನ್ಸ್ ಹಾರ್ಬರ್ ಲಿಂಕ್ ನಲ್ಲಿ ನಡೆದಿದೆ. ಅಪಘಾತದಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ.
ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಸೇತುವೆಯ ಡಿವೈಡರ್ ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.


