ಇಂದು 545 ಪಿಎಸ್ ಐ ನೇಮಕಾತಿ ಮರು ಪರೀಕ್ಷಾ ಕೇಂದ್ರಗಳ ಸುತ್ತಾ ಮುತ್ತಾ 200 ಮೀಟರ್ ವ್ಯಾಪ್ತಿಯಲ್ಲಿ(144 ಸೆಕ್ಷನ್) ನಿಷೇಧಾಜ್ಞೆ ಜಾರಿ ಮಾಡಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ರಿಂದ ಆದೇಶ ಹೊರಡಿಸಲಾಗಿದೆ.
ಪರೀಕ್ಷೆ ವೇಳೆ ಯಾವುದೇ ಪರೀಕ್ಷಾ ಅಕ್ರಮ ಚಟುವಟಿಕೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಕಮಿಷನರ್ ಆದೇಶಿಸಿದ್ದಾರೆ. ಇಂದು ಬೆಂಗಳೂರು ನಗರದ 117 ಕೇಂದ್ರಗಳಲ್ಲಿ ನಡೆಯಲಿದೆ.
ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರನ್ನೂ ಲೋಹಶೋಧಕ ಯಂತ್ರದ ಮೂಲಕ ತಪಾಸಣೆ ನಡೆಸಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಭೇಟಿ ನೀಡಲಿದ್ದಾರೆ. ಅಭ್ಯರ್ಥಿಗಳು ವಸ್ತ್ರ ಸಂಹಿತೆಯಲ್ಲಿನ ಸೂಚನೆಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನಾಗಲಿ, ಮೊಬೈಲ್ ಇಟ್ಟುಕೊಂಡು ಬರುವುದನ್ನಾಗಲಿ ನಿಷೇಧಿಸಲಾಗಿದೆ.
ಪೊಲೀಸರು ಪರೀಕ್ಷಾ ಕೇಂದ್ರಗಳ ಸುತ್ತ ಅನುಮಾನಾಸ್ಪದವಾಗಿ ಓಡಾಡುವವರು, ಗಾಳಿಸುದ್ದಿ ಹಬ್ಬಿಸುವ ಕಿಡಿಗೇಡಿಗಳು ಮತ್ತು ಜೆರಾಕ್ಸ್ ಅಂಗಡಿಗಳ ಮೇಲೆ ಹದ್ದಿನ ಕಣ್ಣಿಡಲಿದ್ದಾರೆ.


