ತುಮಕೂರು: ತುಮಕೂರಿನ ಸಿದ್ದಗಂಗಾ ಮಠದ ತಪ್ಪಲಿನಲ್ಲಿರುವ ರಾಮದೇವರ ಬೆಟ್ಟದಲ್ಲಿ ಭಾರಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಸುಮಾರು ಕಿಲೋಮೀಟರ್ಗಟ್ಟಲೆ ಬೆಂಕಿ ಆವರಿಸುತ್ತಿದ್ದು ಬೆಟ್ಟದ ಸಮೀಪ ಇರುವ ಜನರು ಭಯಭೀತಿಯಲ್ಲಿದ್ದಾರೆ.
ಕಿಡಿಗೇಡಿಗಳಿಂದ ರಾಮದೇವರ ಬೆಟ್ಟಕ್ಕೆ ಬೆಂಕಿ ಹಚ್ಚಿರುವ ಬಗ್ಗೆ ಭಾರಿ ಶಂಕೆ ವ್ಯಕ್ತವಾಗಿದೆ. ಸ್ಥಳೀಯರಿಂದ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ದೊರೆತಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ದೌಡಯಿಸಿದ್ದಾರೆ.
ಅಗ್ನಿಶಾಮಕ ಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


