ಬೆಂಗಳೂರು: ಡಿವೈಡರ್ ಮೇಲೆ ಹಾರಿ ಮುಂದೆ ಬರುತ್ತಿದ್ದ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ.
ಅಪಘಾತಕ್ಕೊಳಗಾದ ಬೈಕ್ ಚಾಲಕನ ಮುಖ ಹಾಗೂ ದೇಹದ ಕೆಲ ಭಾಗಗಳಲ್ಲಿ ರಕ್ತಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಡಿದು ಲಾರಿ ಚಲಾಯಿಸಿ ಅಪಘಾತ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಅಪಘಾತವಾದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.
ಲಾರಿಯ ವೇಗದ ಚಾಲನೆ ನಡುವೆ ಮುಂದೆ ಬರುತಿದ್ದ ಎರಡು ಕಾರುಗಳು ಅಪಘಾತದಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿವೆ. ಕುಡಿದು ಲಾರಿ ಚಲಾಯಿಸಿ ಅಪಘಾತ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಅಪಘಾತವಾದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಯಶವಂತಪುರ ಸಂಚಾರಿ ಠಾಣಾ ಪೊಲೀಸರು, ಲಾರಿ ವಶಕ್ಕೆ ಪಡೆದು ಚಾಲಕನ ಮಾಹಿತಿ ಕಲೆಹಾಕುತ್ತಿದ್ದಾರೆ.


