ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸೇತುವೆಗೆ ಕಾರು ಡಿಕ್ಕಿಯಾದ ಪರಿಣಾಮ ಮೂರು ಸಣ್ಣ ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
ಸಿಂಧುಶ್ರೀ(2 ವರ್ಷ), ಹಯ್ಯಾಳಪ್ಪ (5 ತಿಂಗಳ), ರಕ್ಷಾ (3 ತಿಂಗಳ ) ಹಾಗೂ ಲಿಂಗಪ್ಪ (26) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಇನ್ನುಳಿದ ಯಲ್ಲಮ್ಮ (30), ಮಲ್ಲಮ್ಮ (20), ನಾಗಪ್ಪ(35) ಅವರಿಗೆ ಗಂಭೀರ ಗಾಯಗಳಾಗಿದ್ದು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಸಂಕ್ರಾಂತಿ ಹಬ್ಬಕ್ಕೆಂದು ಬೆಂಗಳೂರಿನಿಂದ ಊರಿಗೆ ಹೋಗಿದ್ದ ಕುಟುಂಬವು ಕಳೆದ ರಾತ್ರಿ ನಗರಕ್ಕೆ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ. ನಿದ್ದೆ ಮಂಪರಿನಲ್ಲಿದ್ದ ಕಾರು ಓಡಿಸುತ್ತಿದ್ದ ಲಿಂಗಪ್ಪ ಸಾಣೆಕೆರೆ ಬಳಿ ನಿಯಂತ್ರಣ ಕಳೆದುಕೊಂಡ ಕಾರಣ ವಾಹನ ಸೇತುವೆಗೆ ಭಾರೀ ವೇಗದಲ್ಲಿ ಅಪ್ಪಳಿಸಿದೆ.

ಮೃತರು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ದಂಡಮ್ಮನಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ. ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪಿಎಸ್‌ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.