ತುಮಕೂರು: ತುಮಕೂರು ನಗರದ ಬಾಲಕಿಯರ ಬಾಲ ಮಂದಿರದಲ್ಲಿ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬಾಲಕಿಯು ಮೈಸೂರು ಮೂಲದವರಾಗಿದ್ದು, ಅಪ್ರಾಪ್ತ ಬಾಲಕಿಗೆ ಬಾಲ ಮಂದಿರದಲ್ಲಿ ಆಶ್ರಯ ನೀಡಲಾಗಿತ್ತು. ಇದೀಗ ಬೆಳ್ಳಂ ಬೆಳಗ್ಗೆ ಬಾಲ ಮಂದಿರದಲ್ಲಿಯೇ ನೇಣಿಗೆ ಶರಣಾಗಿದ್ದಾರೆ.
ಇನ್ನು ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.


