ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಇಂದು 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಎಂಡಿ ವಿ ಅನ್ನುಕುಮಾರ್ ಧ್ವಜಾರೋಹಣವನ್ನು ನೆರವೇರಿಸಿದರು.
ರಾಷ್ಟ್ರಪಿತ ಮಹಾತ್ಮಾ ಗಾಂಧಿ, ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಸಂಗೊಳ್ಳಿ ರಾಯಣ್ಣ ರವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.
ರಾಷ್ಟ್ರೀಯ ಹಬ್ಬಗಳಲ್ಲಿ ಸಿಬ್ಬಂದಿಗಳು ಪಾಲ್ಗೊಂಡು, ರಾಷ್ಟ್ರ ನಿರ್ಮಾಣದಲ್ಲಿ ತಮ್ಮೆಲ್ಲ ವನ್ನು ಸಮರ್ಪಿಸಿದ ಮಹಾನ್ ಚೇತನಗಳ ಕಾರ್ಯ, ತ್ಯಾಗ, ನಿಸ್ವಾರ್ಥಸೇವೆಯನ್ನು ಸ್ಮರಿಸಿ ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕೇಂದ್ರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಏಳು ವರ್ಷಗಳ ಅಪಘಾತ ರಹಿತ ಸೇವೆ ಸಲ್ಲಿಸಿರುವ ಚಾಲಕರಿಗೆ ಬೆಳ್ಳಿ ಪದಕ ಪ್ರಧಾನ ಮಾಡಿ ರೂ 2,000 ಗಳ ನಗದು ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮದಲ್ಲಿ, ಡಾ.ಕೆ. ನಂದಿನಿ ದೇವಿ ಭಾ ಆ ಸೇ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ), ಆಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.


