ಬೆಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ವೇಳೆ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯತ್ನಿಸಿರುವ ಘಟನೆ ನಡೆದಿದೆ.
ಸಿಎಂಗೆ ತಮ್ಮ ಕೆ.ಪಿ.ಎಸ್.ಸಿ. ಆರ್ಡರ್ ವಿಳಂಬದ ಬಗ್ಗೆ ಮನವಿ ಸಲ್ಲಿಸಲು ಪರಶುರಾಮ್ ಬಂದಿದ್ದರು. ಆದರೆ ಪೊಲೀಸರು ಪರಶುರಾಮ್ ರನ್ನು ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗದಂತೆ ತಡೆದರು. ಇದರಿಂದಾಗಿ ಸಿಎಂ ಸಿದ್ದರಾಮಯ್ಯ ರನ್ನು ಭೇಟಿ ಮಾಡಲು, ಪರಶುರಾಮ್ ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲೇ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ.
ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲಿ ಮನವಿ ಪತ್ರ ಪ್ರದರ್ಶಿಸಿದ್ದಾರೆ. ಪರಶುರಾಮ್ ಮನವಿ ಪತ್ರ ಪ್ರದರ್ಶಿಸುತ್ತಿದ್ದ ಹಾಗೇ ಪೊಲೀಸರು ಅವರನ್ನ ವಶಕ್ಕೆ ಪಡೆದು ವಿಚಾರಣೆಗೆ ಕರೆದುಕೊಂಡು ಹೋಗಲಾಗಿದೆ.


