ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್. ವಡ್ಡಹಳ್ಳಿಯ ಹೆದ್ದಾರಿಯಲ್ಲೇ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಕಾರಿನಲ್ಲಿದ್ದ ಒಂದು ಮಗು ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನ ಮಹೇಶ್ ಎಂಬುವವರಿಗೆ ಸೇರಿದ ಕಾರು, ತಾಂತ್ರಿಕ ದೋಷದಿಂದ ಹೊತ್ತಿ ಉರಿದಿದೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ನಂಗಲಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


