ಬೀದರ್: ಜಿಲ್ಲೆಯ ವಿವಿಧೆಡೆ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದ ಸಕಾ೯ರಿ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ ವಿಜ್ರಂಭಣೆಯಿಂದ ಆಚರಿಸಲಾಯಿತು.
ಇದೇ ವೇಳೆ ಬಾಲ್ಯ ವಿವಾಹದ ಬಗ್ಗೆ ಅರಿವು ರೈತರ ಕುರಿತಂತೆ ನಾಟಕ ಪ್ರದರ್ಶಿಸಲಾಯಿತು. ಈ ಸಮಯದಲ್ಲಿ ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕರು ನವನಾಥ ವಡಗಾವೆ, ರೆಡ್ಡಿ ರವೀಂದ್ರ, ರಂಜನಾ ಗಾಯಕವಾಡ, ಜೀವನ ಬೇದ್ರೆ ಉಪಸ್ಥಿತರಿದ್ದರು.
ಇನ್ನೂ ಬೀದರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಗೌರವ ನಮನ ಸಲ್ಲಿಸುವ ಮೂಲಕ ಗಣರಾಜ್ಯೋತ್ಸವ ಆಚರಿಸಲಾಯಿತು.
ವರದಿ: ಅರವಿಂದ ಮಲ್ಲಿಗೆ, ಬೀದರ್


