ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಎಲೆಕ್ಟ್ರಾನಿಕ್ ಸಿಟಿ ಸಮೀಪ ಚಲಿಸುತ್ತಿದ್ದ ಬೈಕ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಘಟನೆ ನಡೆದಿದೆ.
ಬೈಕ್ ಚಲಿಸುತ್ತಿರುವಾಗಲೇ ಏಕಾಏಕಿ ಹೊಗೆ ಬಂದಿದ್ದು, ಇದನ್ನು ಗಮನಿಸಿದ ಸವಾರ ಕೂಡಲೇ ರಸ್ತೆ ಬದಿಗೆ ಸ್ಕೂಟರ್ ನಿಲ್ಲಿಸಿದ್ದಾನೆ. ಬಳಿಕ ಕ್ಷಣ ಮಾತ್ರದಲ್ಲಿ ಬೆಂಕಿ ಕಾಣಿಸಿಕೋಂಡು ಸುಟ್ಟು ಕರಕಲಾಗಿದೆ.
ಎಂಜಿನ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ, ಬೆಂಕಿಯನ್ನು ನಂದಿಸಿದ್ದಾರೆ ಎನ್ನಲಾಗಿದೆ.


