ಮಾಗಡಿ: ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಯುವಕ ಸಾವನ್ನಪ್ಪಿದ್ದರೆ, ಮತ್ತಿಬ್ಬರಿಗೆ ಗಂಭೀರ ಗಾಯವಾದ ಘಟನೆ ಮಾಗಡಿ ತಾಲೂಕಿನ ವಡ್ಡರಪಾಳ್ಯ ಬಳಿ ನಡೆದಿದೆ. ಪ್ರದೀಪ್ (18) ಯುವಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತಿಬ್ಬರು ಗಾಯಾಳುಗಳನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಸ್ ಓವರ್ ಟೇಕ್ ಮಾಡಲು ಹೋದಾಗ ಬೈಕ್ ಗಳೆರಡು ಡಿಕ್ಕಿ ಹೊಡೆದುಕೊಂಡು ಈ ಅಪಘಾತ ಸಂಭವಿಸಿದೆ. ಮಾಗಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


