ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ನಡೆದಿದೆ. ತಾಯಿ ಅಂಜನಾ ಹಾಗೂ ಮಕ್ಕಳಾದ ಕಾರ್ತಿಕ್, ಖುಷಿ ಹಾಗೂ ಕೀರ್ತನಾಗೆ ಗಂಭೀರ ಗಾಯಗಳಾಗಿವೆ.
ಗಾಯಗೊಂಡ ತಾಯಿ ಮಕ್ಕಳನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೇವಸ್ಥಾನದಲ್ಲಿ ಹಚ್ಚಿದ ದೀಪದಿಂದ ಸಿಲಿಂಡರ್ ಸ್ಫೋಟಗೊಂಡಿದ್ದು, ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ದುರಂತ ಹಿನ್ನೆಲೆ ಕಲಬುರಗಿ ಖಾಸಗಿ ಆಸ್ಪತ್ರೆಗೆ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಭೇಟಿ ನೀಡಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿ, ಅಲ್ಲದೇ ಗಾಯಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಆಸ್ಪತ್ರೆ ಆಡಳಿತ ಮಂಡಳಿಗೆ ಅಜಯ್ ಸಿಂಗ್ ಹೇಳಿದ್ದಾರೆ.


