ರೇವಾ: ಗಣರಾಜ್ಯೋತ್ಸವದ ಅಂಗವಾಗಿ ಶಾಲೆಯಲ್ಲಿ ವಿತರಿಸಲಾಗಿದ್ದ ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಸುಮಾರು 58 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಊಟ ಸೇವಿಸಿದ ಬಳಿಕ ಹೊಟ್ಟೆ ನೋವು ಮತ್ತು ವಾಂತಿಯಿಂದ ಬಳಲುತ್ತಿದ್ದ 58 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ.
ಗಣರಾಜ್ಯೋತ್ಸವದ ಅಂಗವಾಗಿ ಪದ್ರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಕಾರ್ಯಕ್ರಮದ ನಂತರ ಮಕ್ಕಳಿಗೆ ಮಧ್ಯಾಹ್ನದ ಊಟವನ್ನೂ ತಯಾರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಪೂರಿ, ಕೋಸಂಬರಿ, ಲಡ್ಡೂ ಬಡಿಸಲಾಯಿತು. ಅನೇಕ ವಿದ್ಯಾರ್ಥಿಗಳಿಗೆ ತಿಂದ ತಕ್ಷಣ ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ.


