ಉತ್ತರಾಖಂಡ ವಕ್ಫ್ ಮಂಡಳಿಗೆ ಸಂಯೋಜಿತವಾಗಿರುವ ಮದರಸಾಗಳು ಭಗವಾನ್ ರಾಮನ ಕಥೆಯನ್ನು ಪಠ್ಯಕ್ರಮದ ಭಾಗವಾಗಿಸಲು ಮುಂದಾಗಿವೆ.ಈ ವರ್ಷದ ಮಾರ್ಚ್‌ನಲ್ಲಿ ಪ್ರಾರಂಭವಾಗುವ ಅಧಿವೇಶನದಲ್ಲಿ ಹೊಸ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾದಾಬ್ ಶಾಮ್ಸ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಇಂಡಿಯಾ ಟುಡೇ, ಡೆಕ್ಕನ್ ಹೆರಾಲ್ಡ್ ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿವೆ. ಉತ್ತರಾಖಂಡ ಶಿಕ್ಷಣ ಮಂಡಳಿಯ ಮಾರ್ಗಸೂಚಿಗಳ ಆಧಾರದ ಮೇಲೆ ಪರಿಷ್ಕೃತ ಪಠ್ಯಕ್ರಮವನ್ನು ಮಾರ್ಚ್‌ನಿಂದ ಉತ್ತರಾಖಂಡ ವಕ್ಫ್ ಮಂಡಳಿಗೆ ಸಂಯೋಜಿತವಾಗಿರುವ ಮದರಸಾಗಳಲ್ಲಿ ಪರಿಚಯಿಸಲಾಗುವುದು ಎಂದು ವಕ್ಫ್ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.
ಪ್ರವಾದಿ ಮುಹಮ್ಮದ್ ಅವರ ಜೀವನದೊಂದಿಗೆ ಶ್ರೀರಾಮನ ಜೀವನ ಕಥೆಯನ್ನು ಮದರಸಾದ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು ಎಂದು ಹೇಳಿದರು. ಭಗವಾನ್ ರಾಮನು ಪ್ರತಿನಿಧಿಸುವ ಮೌಲ್ಯಗಳನ್ನು ಅವರ ಧರ್ಮ ಅಥವಾ ಪಂಥವನ್ನು ಲೆಕ್ಕಿಸದೆ ಎಲ್ಲರೂ ಅನುಸರಿಸಬೇಕು.
ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಹೆಸರಿನಲ್ಲಿ ಪ್ರಾರಂಭವಾಗಿರುವ ಆಧುನಿಕ ಮದರಸಾಗಳಲ್ಲಿ ಎನ್ ಸಿಇಆರ್ ಟಿ ಪಠ್ಯಕ್ರಮವನ್ನು ಕಲಿಸಲಾಗುತ್ತದೆ. ಉತ್ತರಾಖಂಡದಲ್ಲಿ ವಕ್ಫ್ ಬೋರ್ಡ್ 117 ಮದರಸಾಗಳನ್ನು ಹೊಂದಿದೆ. ಉಳಿದ 415 ಮದರಸಾಗಳು ಮದರಸಾ ಮಂಡಳಿಯ ಅಡಿಯಲ್ಲಿ ಬರುತ್ತವೆ.


