ಕಲಬುರಗಿ: ನಿತೀಶ್ ಕುಮಾರ್ ಮಹಾಘಟಬಂಧನ್ ತೊರೆಯುವ ಬಗ್ಗೆ ಮುಂಚೆಯೇ ಗೊತ್ತಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಾಗೂ ಅವರ ಮಗ ತೇಜಸ್ವಿ ಯಾದವ್ ಅವರೊಂದಿಗೆ ಮಾತನಾಡುವಾಗ ನಿತೀಶ್ ಮಹಾಘಟಬಂಧನ್ ತೊರೆಯುವ ಬಗ್ಗೆ ಮಾಹಿತಿ ನೀಡಿದ್ದರು. ಅದು ಇಂದು ನಿಜವಾಗಿದೆ ಎಂದು ಅವರು ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆ ಸೀಟು ಹಂಚಿಕೆ ಕುರಿತು ಇಂಡಿಯಾ ಮೈತ್ರಿಕೂಟದ ಇತರ ಪಕ್ಷಗಳೊಂದಿಗೆ ಚರ್ಚಿಸಲು ಆರು ಜನರ ಸಮಿತಿ ರಚಿಸಲಾಗಿದೆ. ವಿವಿಧ ಪಕ್ಷಗಳೊಂದಿಗೆ ಸೀಟು ಹಂಚಿಕೆ ಕುರಿತು ಚರ್ಚೆ ನಡೆದಿದೆ ಎಂದು ಇದೇ ವೇಳೆ ಅವರು ತಿಳಿಸಿದರು.


