ಚಿತ್ರದುರ್ಗ: ಮಂಡ್ಯದಲ್ಲಿ ಹನುಮ ಧ್ವಜ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಚಿತ್ರದುರ್ಗದ ಎಸ್.ಜೆಎಂ ಶಾಲಾ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.
ಧ್ವಜಸ್ಥಂಭದಲ್ಲಿ ರಾಷ್ಟ್ರ ಧ್ಬಜ ಹಾರಿಸುವ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಷ್ಟ್ರ ಧ್ಬಜ ಹಾಗೂ ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತು. ಆದರೆ, ರಾಷ್ಟ್ರ ಧ್ಬಜ ಹಾರಿಸುವ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ ಎಂದು ಸಿಎಂ ಅಸಮಾಧಾನ ಹೊರಹಾಕಿದರು.


