ಮೈಸೂರು: ಮೈಸೂರು-ನಂಜನಗೂಡು ರಸ್ತೆಯ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ಹುಲಿಗೆ ವೇಗವಾಗಿ ಸಾಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಹುಲಿ ಸ್ಥಳದಲ್ಲೇ ಮೃತಪಟ್ಟಿದೆ.
ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿಯ ಸಾವು ಒಂದು ಕಡೆ ಆತಂಕಕ್ಕೆ ಕಾರಣವಾಗಿದ್ದರೆ, ಇನ್ನೊಂದು ಕಡೆ ಮಂಡಕಳ್ಳಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಹುಲಿಗಳ ಸಂಚಾರವೂ ಜನರಿಗೆ ಭಯವನ್ನು ಹುಟ್ಟಿಸಿದೆ.
ಈ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾರನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


