ತಮಿಳುನಾಡು: ವ್ಯಕ್ತಿಯೊಬ್ಬ ಚಲಿಸುತ್ತಿರುವ ಬಸ್ ನಿಂದ ತಳ್ಳಿದ ಪರಿಣಾಮ, ಗರ್ಭಿಣಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ದಿಂಡಿಗಲ್ ನಲ್ಲಿ ಘಟನೆ ನಡೆದಿದ್ದು, ಪತ್ನಿಯ ಸಾವಿಗೆ ಕಾರಣನಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 19 ವರ್ಷದ ವಳರಮತಿ ಮೃತ ದುರ್ದೈವಿ.
ದಂಪತಿ ದಿಂಡಿಗಲ್ ನಿಂದ ಪೊನ್ನಮರಾವತಿಗೆ ಉಪನಗರದ ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಘಟನೆ ನಡೆದಿದೆ. ಮದ್ಯದ ಅಮಲಿನಲ್ಲಿ ಪಾಂಡಿಯನ್ ಐದು ತಿಂಗಳ ಗರ್ಭಿಣಿಯಾಗಿದ್ದ ವಳರಮತಿಯೊಂದಿಗೆ ಜಗಳವಾಡಿದ್ದು, ಜಗಳ ತಾರಕಕ್ಕೇರಿ, ಪಾಂಡಿಯನ್ ತನ್ನ ಹೆಂಡತಿಯನ್ನು ಚಲಿಸುವ ಬಸ್ ನಿಂದ ಹೊರ ಹಾಕಿದ್ದಾನೆ. ಅದು ಆಕೆಯ ಸಾವಿಗೆ ಕಾರಣವಾಯಿತು.
ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಳರಮತಿ ಮೃತದೇಹವನ್ನು ಹೊರತೆಗೆದಿದ್ದಾರೆ. ನಂತರ ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ದಿಂಡುಗಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಪಾಂಡಿಯನ್ನನ್ನು ಬಂಧಿಸಲಾಗಿದೆ.


