ಬೆಂಗಳೂರು: ಹಿರಿಯ ನಟ ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಮೆದುಳಿಗೆ ತೀವ್ರ ಹಾನಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾಗಿ ಶಿವರಾಮ್ ಹಿರಿಯ ಪುತ್ರ ರವಿಶಂಕರ್ ತಿಳಿಸಿದ್ದಾರೆ.
ನಟ ಶಿವರಾಮ್ ಮೂರು ದಿನಗಳ ಹಿಂದೆ ಮನೆಯಲ್ಲಿಯೇ ಬಿದ್ದು ಪ್ರಜ್ಞಾಹೀನ ಸ್ಥಿತಿ ತಲುಪಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಕ್ಯಾನಿಂಗ್ ವರದಿಯಲ್ಲಿ ಅವರ ಮೆದುಳಿನಲ್ಲಿ ರಕ್ತಸ್ರಾವವಾಗಿರುವುದು ತಿಳಿದುಬಂದಿದೆ. ಸರ್ಜರಿ ಮಾಡಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ನಮ್ಮ ತಂದೆಗೆ ವಯಸ್ಸಾಗಿರುವುದರಿಂದ ಸರ್ಜರಿ ಮಾಡಲು ಆಗಿಲ್ಲ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ.
ಸಧ್ಯ ಐಸಿಯುನಲ್ಲಿಯೇ ಶಿವರಾಮ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಚಿಕಿತ್ಸೆಗೆ ಅಷ್ಟಾಗಿ ಸ್ಪಂದಿಸುತ್ತಿಲ್ಲ. ಅವರು ಬೇಗ ಗುಣಮುಖರಾಗಲೆಂಬುದು ನಮ್ಮ ಪ್ರಾರ್ಥನೆ ಎಂದು ರವಿಶಂಕರ್ ತಿಳಿಸಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700