ಪಾವಗಡ: “ಮೊಬೈಲ್ ದೂರ ಇಡಿ, ಪುಸ್ತಕದ ಕಡೆ ಹೆಚ್ಚಿನ ಗಮನ ನೀಡಿ” ಎಂದು ವಿದ್ಯಾರ್ಥಿಗಳಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಟ್ಟಾ ನರಸಿಂಹಮೂರ್ತಿ ಕಿವಿಮಾತು ತಿಳಿಸಿದರು.
ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆ ಗ್ರಾಮದ ಮಾಧವ ವಿದ್ಯಾ ಸಂಸ್ಥೆಯ ಎಸ್.ಎಂ. ಆಂಗ್ಲ ಮಾಧ್ಯಮ ಶಾಲೆಯ 25ನೇ ಶಾಲಾ ವಾರ್ಷಿಕೋತ್ಸವ ಹಾಗೂ ಬೆಳ್ಳಿ ಉತ್ಸವ ಸಮಾರಂಭವನ್ನು ಕೆ.ಇ.ಬಿ. ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಲವಾರು ವಿದ್ಯಾರ್ಥಿಗಳು ಕೇವಲ ಮೊಬೈಲ್, ಟಿವಿಗೆ ಅಂಟಿಕೊಂಡಿರುತ್ತಾರೆ. ಅದನ್ನು ಬಿಟ್ಟು ಓದಿನ ಕಡೆ ಗಮನಹರಿಸಬೇಕು. ಹೆಚ್ಚಿನ ಪುಸ್ತಕಗಳನ್ನು ಓದಲು ಸಮಯ ನೀಡಬೇಕು. ಶಿಕ್ಷಕರು ಬೋಧಿಸುವ ಪಾಠ ಗಮನವಿಟ್ಟು ಕೇಳಿಸಿಕೊಂಡು ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆಯಬೇಕು, ಆ ಮೂಲಕ ಉನ್ನತ ಅಧಿಕಾರಿಗಳಾಗಿ ಸಮಾಜಕ್ಕೆ ಸೇವೆ ಸಲ್ಲಿಸಬೇಕು ಎಂದರು.
ಗಡಿಭಾಗದಲ್ಲಿ ಶಿಕ್ಷಣ ಸಂಸ್ಥೆಯನ್ನು ರೂಪಿಸಿ ಕಳೆದ 25 ವರ್ಷಗಳಿಂದ ಉತ್ತಮ ಗುಣಮಟ್ಟ ಶಿಕ್ಷಣವನ್ನುಮಾಧವ ವಿದ್ಯಾ ಸಂಸ್ಥೆಯ ನೀಡುತ್ತಾ ಬರುತ್ತಿದೆ ಎಂದು ಇದೇ ವೇಳೆ ಅವರು ತಿಳಿಸಿದರು.
ಇದೇ ವೇಳೆ ಶಾಲಾ ಮಕ್ಕಳಿಂದ ವಿವಿಧ ಮನರಂಜನಾ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು. ಶಾಲಾ ವಾರ್ಷಿಕೋತ್ಸವ ಪ್ರಯುಕ್ತ ಪೋಷಕರಿಗೆ ಕ್ರೀಡಾಕೂಟ ಆಯೋಜಿಸಲಾಗಿತ್ತು ಇದರಲ್ಲಿ ವಿಜೇತರಾದ ಪೋಷಕರಿಗೆ ಬಹುಮಾನವನ್ನು ವಿತರಿಸಲಾಯಿತು
ಈ ಸಂದರ್ಭದಲ್ಲಿ ಎಸ್.ಎಂ.ಶಾಲೆಯ ಅಧ್ಯಕ್ಷ ಜೆ. ಮಧುಸೂದನ್, ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸೈಯದ್ ಶಾನವಾಜ್, ರಾಷ್ಟ್ರೀಯ ವಿದ್ಯಾಪೀಠ ಸಂಸ್ಥೆಯ ಕಾರ್ಯದರ್ಶಿ ಎನ್.ಆರ್. ಅಶ್ವತ್ ಕುಮಾರ್, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಸೊಗಡು ವೆಂಕಟೇಶ್, ವಿ.ಎಸ್.ಎಸ್.ಎನ್. ಅಧ್ಯಕ್ಷ ಕೋನೇರಪ್ಪ, ಬಿ.ಆರ್.ಸಿ.ವೆಂಕಟೇಶ್, ಬಿ.ಕೆ.ಶಿವಕುಮಾರ್, ಸಿ.ಆರ್.ಪಿ. ಬಂಗಾರಲಿಂಗಂ, ಎಸ್.ಎಂ. ಶಾಲೆಯ ಖಜಾಂಚಿ ಡಿ.ಹೆಚ್. ಸಿದ್ಧಲಕ್ಷ್ಮಿ, ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು.
ವರದಿ: ನಂದೀಶ್ ನಾಯ್ಕ


