ಇಂದು ಕೇಂದ್ರವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದು ಇದಕ್ಕೂ ಮುನ್ನವೇ ಬೆಲೆ ಏರಿಕೆ ಬಿಸಿ ತಟ್ಟಿದೆ. ಹೌದು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆಯಾಗಿದೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 14 ರೂ. ಹೆಚ್ಚಳವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1769 ರೂ, ಕೋಲ್ಕತ್ತಾದಲ್ಲಿ 19 ಕೆಜಿ ಸಿಲಿಂಡರ್ ಬೆಲ 1887 ರೂ. ಮುಂಬೈನಲ್ಲಿ 1723 ರೂ. ಚೆನ್ನೈನಲ್ಲಿ 1937 ರೂ. ಆಗಿದೆ.


