ಕಲಬುರಗಿ: ಚಾಲಕನ ನಿರ್ಲಕ್ಷ್ಯದಿಂದ ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಶಾಲಾ ವಾಹನ ಹರಿದು ಮಗು ಸಾವನ್ನಪ್ಪಿರುವಂತಹ ಘಟನೆ ನಗರದ ಸಂಗಮೇಶ್ವರ ಕಾಲೋನಿಯಲ್ಲಿ ನಡೆದಿದೆ. ಮನೋಜ್(2) ಮೃತ ಮಗು.
ನ್ಯಾಷನಲ್ ಪಬ್ಲಿಕ್ ಶಾಲೆಗೆ ಸೇರಿದ ವಾಹನ ಹರಿದು ಮಗು ಮೃತಪಟ್ಟಿದೆ. ವಿದ್ಯಾರ್ಥಿಗಳನ್ನು ಶಾಲೆಯಿಂದ ಮನೆಗೆ ಬಿಟ್ಟು ವಾಹನ ತೆರಳುತ್ತಿರುವಾಗ ಈ ಘಟನೆ ನಡೆದಿದೆ.


