ಮಧ್ಯಪ್ರದೇಶ: ಪೋಷಕರ ಹಣೆಗೆ ಗನ್ ಇಟ್ಟು, ಪೋಷಕರ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ರಾತ್ರಿ ಭನ್ವಾರ್ ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಎರಡು ದಿನಗಳ ನಂತರ ದೂರು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ರಿಷಿಕೇಶ್ ಮೀನಾ ತಿಳಿಸಿದ್ದಾರೆ. ಒಬ್ಬ ಶಂಕಿತನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.
ಬಾಲಕಿಯ ಕುಟುಂಬವು ಒಂದು ತಿಂಗಳ ಹಿಂದೆಯಷ್ಟೇ ಆ ಪ್ರದೇಶಕ್ಕೆ ತೆರಳಿತ್ತು, ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.


