ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಕ್ಯಾಬ್ ಒಂದು ಸ್ಕಿಡ್ ಆಗಿ ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ ಏಳು ಜನ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದರೆ, ಅಲ್ಲದೇ ಏಳು ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾಶ್ಮೀರದ ಟ್ರಾಫಿಕ್ ರೂರಲ್ ಕಾಶ್ಮೀರದ ಹಿರಿಯ ಪೊಲೀಸ್ ಅಧೀಕ್ಷಕ ರವೀಂದರ್ ಪಾಲ್ ಸಿಂಗ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.


