ಬಾಗಲಕೋಟೆ ಜಿಲ್ಲೆ: ಶಾಲೆಯಿಂದ ಮನೆಗೆ ತೆರಳುವಾಗ ಟ್ರ್ಯಾಕ್ಟರ್ ಡಬ್ಬಿಗೆ ಸಿಲುಕಿದ ವಿದ್ಯಾರ್ಥಿಯೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಗಿರೀಶ್ ಶಾಲೆ ಬಳಿ ನಡೆದಿದೆ. ನಿಖಿಲ್ ಕೊಳಿ (13) ಮೃತ ವಿದ್ಯಾರ್ಥಿಯಾಗಿದ್ದಾನೆ.
ನಿಖಿಲ್ ಜಮಖಂಡಿ ನಗರದ ಜ್ಞಾನ ಗಂಗೋತ್ರಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಶಾಲೆ ಮುಗಿಸಿ ಸೈಕಲ್ ನಲ್ಲಿ ಹೋಗುತ್ತಿದ್ದ ನಿಖಿಲ್ ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಜಮಖಂಡಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.


