ಬೆಂಗಳೂರಿನಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿರುವುದರ ಮಧ್ಯೆಯೇ 18 ವರ್ಷ ವಯಸ್ಸಾಗದ, ಚಾಲನಾ ಪರವಾನಗಿ ಹೊಂದಿಲ್ಲದ ಶಾಲೆ, ಕಾಲೇಜು ವಿದ್ಯಾರ್ಥಿಗಳು ಬೈಕ್ ರೈಡ್ ಮಾಡುವ ಪ್ರಕರಣಗಳೂ ಹೆಚ್ಚಾಗಿವೆ.
ಡಿಎಲ್ ಇಲ್ಲದೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಬೈಕ್ ರೈಡ್ ಮಾಡಿದ ವಿಚಾರವಾಗಿ ಒಂದೇ ದಿನದಲ್ಲಿ ನಗರದಲ್ಲಿ 1800 ಮಕ್ಕಳ ಪೋಷಕರಿಗೆ ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ.
17 ರಿಂದ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಇಲ್ಲ ಅಂದರೆ ದಂಡ ಫಿಕ್ಸ್
ಈಗಾಗಲೇ ರಾಜ್ಯ ಸಾರಿಗೆ ಇಲಾಖೆ ಹೆಚ್‌ಎಸ್‌ಆರ್‌ಪಿ ನೇಮ್ ಬೋರ್ಡ್ ಹಾಕಿಸಿಕೊಳ್ಳಲು ವಾಹನ ಸವಾರರಿಗೆ ಡೆಡೈನ್ ನೀಡಲಾಗಿದೆ. ಅದರೆ ಜನರು ಯಾರು ಕೂಡ ಹೊಸ ನಂಬರ್ ಪ್ಲೇಟ್ ಗಳನ್ನು ಹಾಕಿಸಿಕೊಳ್ಳಲು ಮುಂದಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ದಂಡ ಪ್ರಯೋಗಕ್ಕೆ ಮುಂದಾಗಿದೆ. ಫೆ. 17 ರಿಂದ ನಂಬರ್ ಪ್ಲೇಟ್ ಇಲ್ಲ ಅಂದರೆ ದಂಡ ಖಚಿತವಾಗಿದೆ. ಮೊದಲನೆ ಬಾರಿ ಸಿಕ್ಕಿಬಿದ್ದರೆ 1 ಸಾವಿರ, 2ನೇ ಬಾರಿ ಸಿಕ್ಕಿಬಿದ್ದರೆ 2 ಸಾವಿರ ದಂಡ ಹಾಕಲಾಗುತ್ತದೆ.


