ಬೆಂಗಳೂರು: ವಯಸ್ಸಾದ ಕಾಲದಲ್ಲಿ ದೇವೇಗೌಡರಿಗೆ ಕುಮಾರಸ್ವಾಮಿ ನೋವು ಕೊಟ್ಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಳ್ಳಬಾರದಿತ್ತು, ಅವರು ಪಕ್ಷದ ಶಾಲು ಹಾಕಿಕೊಳ್ಳಬೇಕಿತ್ತು. ನಾನು ಕೇಸರಿ ಶಾಲು ಹಾಕುವುದಿಲ್ಲ ಎಂಬ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೇಳಿಕೆಗೆ ಡಿಕೆಶಿ ಈ ರೀತಿಯ ಉತ್ತರ ನೀಡಿದರು.
ನಾನು ದೇವೇಗೌಡರ ಸಿದ್ಧಾಂತವನ್ನು ಹತ್ತಿರದಿಂದ ನೋಡಿದ್ದೇನೆ. ಪಾಪ ವಯಸ್ಸಾದ ಕಾಲದಲ್ಲಿ ಅವರಿಗೆ ನೋವು ಕೊಟ್ಟಿದ್ದಾರೆ ಎಂದು ದೇವೇಗೌಡರ ಪರ ಬ್ಯಾಟಿಂಗ್ ಮಾಡಿದ್ದಾರೆ.
ಕುಮಾರಸ್ವಾಮಿ ಅವರು ಬಿಜೆಪಿ ವಕ್ತಾರರಾಗಿದ್ದಾರೆ. ದೇವೇಗೌಡರಿಗೆ ಇಷ್ಟು ನೋವು ತರುತ್ತಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ದೇವೇಗೌಡರ ಸಿದ್ಧಾಂತವನ್ನು ನಾನು ಹತ್ತಿರದಿಂದ ಕಂಡಿದ್ದೇನೆ. ಮಕ್ಕಳಿಗಾಗಿ ಅವರು ಏನೆಲ್ಲ ಮಾಡಬೇಕು. .ಪಾಪ ವಯಸ್ಸಾದ ಕಾಲದಲ್ಲಿ ಅವರಿಗೆ ಮನೆಯಲ್ಲಿ ಇಂತಹ ನೋವು ಕೊಟ್ಟಿದ್ದಾರೆ. ನಮಗು ಮಕ್ಕಳಿದ್ದಾರೆ. ವಯಸ್ಸಾದ ಕಾಲದಲ್ಲಿ ಏನಾಗುತ್ತೋ ಏನೋ ಭಯವಾಗುತ್ತಿದೆ ಎಂದು ಕುಮಾರಸ್ವಾಮಿಗೆ ಟಾಂಗ್ ನೀಡಿದರು.


